ಸಾಂಧರ್ಭಿಕ ಚಿತ್ರ ಈಗೊಂದು ತಿಂಗಳ ಕೆಳಗೆ ನಮಗೆ ರಜೆ ಇದ್ದ ಸಂದರ್ಭ ಎಂದೆಣಿಸುತ್ತೇನೆ. ಮನೆಯಲ್ಲಿದ್ದ ನನ್ನನ್ನು ದೊಡ್ಡಪ್ಪ ಕರೆದರು. ನಾನು ಅವರೊಂದಿಗೆ ಪಕ್ಕದೂರಿಗೆ ಬ್ಯಾಂಕಿಗೆ ಹೋಗಬೇಕಾಗಿ ಬಂತು, ಸರಿ ಹೊರಟೆ. ತಕ್ಕ ಮಟ್ಟಿಗೆ ಓದಿದವರೇ, ಆಗಿನ ಕಾಲಕ್ಕೆ ಐದು-ಆರನೇ ತರಗತಿ ಹೆಚ್ಚಲ್ಲವೇ?! ಆದರೆ ಸಮಸ್ಯೆ ಅದಲ್ಲ ಬ್ಯಾಂಕಿನ ಚೀಟಿಗಳಲ್ಲಿರುವ ಭಾಷೆ ಅರ್ಥ ಮಾಡಿಕೊಳ್ಳಲಾಗದ ಸ್ಥಿತಿ. ಓಕೆ ಆ ಸಂದರ್ಭದಲ್ಲಿ ನಾನವರಿಗೆ ನೆರವಾದೆ. ವಾಪಾಸು ಬರಲು ಅಣಿಯಾಗುವಾಗ "ತಮ್ಮಾ, ಇದೊಂಚೂರು ಏನು ನೋಡ್ತೀಯಾ?!" ಶಬ್ದ, ತಿರುಗಿ ನೋಡಿದೆ. ೫೦-೫೫ ವರ್ಷದವ ಮಗನಿಗೆ ಹಣ ತುಂಬಲು ಚಲನ್ ಬರೆಯಬೇಕಿತ್ತು, ಆಯ್ತು ಬರೆದುಕೊಟ್ಟೆ. ಸುತ್ತಲೂ ನೋಡಿದೆ ಅಲ್ಲಲ್ಲಿ ಅದೇ ವಾತಾವರಣ. ಇನ್ನೇನು ಮನೆ ಕಡೆಗೆ ಹೊರಟೆ, ಮಿರ್ಚಿ-ಮಂಡಕ್ಕಿ ತಿಂದು. ಸುಮ್ನೆ ಉದಾಹರಣೆಗೆ ಇರ್ಲಿ ಅಂತ ಹೇಳ್ದೆ ಅಷ್ಟೇ. ಇದೇ ಪರಿಸ್ಥಿತಿ ರೈಲ್ವೇ, ಅಂಚೆ ಕಛೇರಿ, ಗ್ಯಾಸ್ ಸಿಲಿಂಡರ್, ಪಾಸ್ ಪೋರ್ಟ್, ಇತ್ಯಾದಿ ಎಲ್ಲೆಡೆ ಸರ್ವೇ ಸಾಮಾನ್ಯ. ಕುಮುದೇಂದು ಮುನಿ' ರಚಿಸಿದ 'ಸಿರಿ ಭೂವಲಯ' ಎಂಬಲ್ಲಿ, ಸೊನ್ನೆಯಿಂದಲೇ ಎಲ್ಲಾ ಅಂಕೆಗಳನ್ನು ಮತ್ತು ಅಕ್ಷರಗಳನ್ನು ಸೃಷ್ಟಿಸಲಾಯಿತು ಮತ್ತು ಕನ್ನಡ ಭಾಷೆಗೆ ವಿಶ್ವದ ಎಲ್ಲಾ ಭಾಷೆಗಳನ್ನು ಅಡಗಿಸಿಕೊಳ್ಳುವ ಶಕ್ತಿ ಇದೆಯೆಂದು 'ಕುಮುದೇಂದು ಮುನಿ' ತನ್ನ ಗ್ರಂಥದಲ್ಲಿ ಸಾಬೀತುಪಡಿಸಿದ್ದಾರೆ. ಆದಿ...